ಗೂಗಲ್‌: ಜಿಮೇಲ್‌ ಸೇವೆಯಲ್ಲಿ ವ್ಯತ್ಯಯ ನವದೆಹಲಿ:ಭಾರತ ಸೇರಿದಂತೆ ವಿಶ್ವದ ಹಲವೆಡೆ ಇಮೇಲ್ ಸೇವೆ ಒದಗಿಸುವ ಗೂಗಲ್‌ನ ಜಿಮೇಲ್‌ ಸೇವೆಯಲ್ಲಿ ವ್ಯತ್ಯಯವಾಗಿದ್ದು ಬಳಕೆದಾರರು ಸಂದೇಶ ಕಳುಹಿಸಲು ಸಾಧ್ಯವಾಗುತ್ತಿಲ್ಲ. ಗೂಗಲ್‌ ಕಂಪನಿ ಜಿಮೇಲ್‌ ಡೌನ್‌ ಆಗಿರುವುದನ್ನು ಖಚಿತಪಡಿಸಿದ್ದುಸಾಧ್ಯವಾದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದೆ. ಭಾರತದಲ್ಲಿ ಬೆಳಗ್ಗೆ 11 ಗಂಟೆಯಿಂದ ಈ ಸಮಸ್ಯೆ ಎದುರಾಗಿದೆ. ಜಿಮೇಲ್‌ನಲ್ಲಿ ಚಿತ್ರಗಳು, ವಿಡಿಯೊಗಳುಹಾಗೂ ಫೈಲ್‌ಗಳನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲ. ಜಿಮೇಲ್‌ನ ವೈಯಕ್ತಿಕ ಖಾತೆಗಳಲ್ಲಿ ದೊಡ್ಡ ದೊಡ್ಡ ಮೇಸೆಜ್‌ಗಳನ್ನು ಕಳಹಿಸಲು ಆಗುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಭಾರತ ಸೇರಿದಂತೆ ಏಷ್ಯಾ, ಯುರೋಪ್‌ ಹಾಗೂ ಅಮೆರಿಕ ಖಂಡದ ಹಲವು ದೇಶಗಳಲ್ಲಿ ಈ ಸಮಸ್ಯೆ ಉಂಟಾಗಿದೆ. ಜಿಸ್ಯೂಟ್‌ ಸೇರಿದಂತೆ, ಗೂಗಲ್‌ ಡ್ರೈವ್‌ ಸೇವೆಯಲ್ಲೂ ಸಮಸ್ಯೆಯಾಗಿದೆ. ಮಾಹಿತಿ, ಚಿತ್ರ, ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಮತ್ತು ಡೌನ್‌ಲೋಡ್‌ ಮಾಡಲು ಆಗುತ್ತಿಲ್ಲ ಎಂದು ಬಳಕೆದಾರರು ತಿಳಿಸಿದ್ದಾರೆ. ಗೂಗಲ್‌ ಕಂಪನಿಜಿಮೇಲ್‌ ಸೇವೆಯಲ್ಲಿ ತೊಂದರೆಯಾಗಿರುವುದರ ಬಗ್ಗೆ ಜಿಸ್ಯೂಟ್‌ಡ್ಯಾಶ್‌ ಬೋರ್ಡ್‌ನಲ್ಲಿ ಪ್ರಕಟಿಸಿದೆ. ಸಮಸ್ಯೆ ಬಗ್ಗೆ ತಂತ್ರಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನ 1.30ಕ್ಕೆ ನೀಡಲಾಗುವುದು ಎಂದು ಗೂಗಲ್‌ ಕಂಪನಿ ಹೇಳಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.