S23+: ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿರುವ ಐಟೆಲ್, ಇಲ್ಲಿದೆ ಮಾಹಿತಿ ನವದೆಹಲಿ: ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್ () ಸಂಸ್ಥೆ ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್ಫೋನ್‌ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಹೊಸ ಸ್ಮಾರ್ಟ್‌ಫೋನ್ ಬೆಲೆ ₹14,999. ಈ ಫೋನ್ 3D ಬಾಗಿದ ಡಿಸ್‌ಪ್ಲೇಯನ್ನು ಹೊಂದಿದ್ದು, ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಒಳಗೊಂಡಿರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಐಟೆಲ್‌ ಕಂಪನಿಯು ( S23) ಈಚೆಗೆ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಮೊಬೈಲ್‌ಗಳನ್ನು ಬಿಡುಗಡೆ ಮಾಡಿತ್ತು. 8GB + 128GB ಸ್ಟೋರೇಜ್ ರೂಪಾಂತರಕ್ಕೆ ಕೇವಲ ₹8,799 ರಷ್ಟಿದರೆ, 4GB + 128GB ಫೋನ್‌ಗೆ ₹8,469 ರಷ್ಟಿತ್ತು. ಈ ಸ್ಮಾರ್ಟ್‌ಫೋನ್‌ ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆಯಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.