7 5G | ಐಕ್ಯೂ ಪ್ರೀಮಿಯಂ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಲಗ್ಗೆ ಬೆಂಗಳೂರು: ಚೀನಾ ಮೂಲದ ವಿವೊ ಕಂಪನಿಯ ಮತ್ತೊಂದು ಬ್ರ್ಯಾಂಡ್ ಆಗಿರುವ ಐಕ್ಯೂ, ಭಾರತದ ಮಾರುಕಟ್ಟೆಗೆ ನೂತನ ಪ್ರೀಮಿಯಂ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್, ಕಳೆದ ಅಕ್ಟೋಬರ್‌ನಲ್ಲಿ ಚೀನಾದಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದೆ ಎಂದು ಕಂಪನಿ ತಿಳಿಸಿದೆ. ಐಕ್ಯೂ ನಿಯೋ 7 5G ನೂತನ ಐಕ್ಯೂ ಪ್ರೀಮಿಯಂ ಸ್ಮಾರ್ಟ್‌ಫೋನ್, 12 ಮತ್ತು 256 ಸ್ಟೋರೇಜ್ ಆವೃತ್ತಿ ಮೂಲಕ ದೊರೆಯಲಿದೆ. 6.78 ಇಂಚಿನ ಡಿಸ್‌ಪ್ಲೇ, ಮೀಡಿಯಾಟೆಕ್ ಡೈಮೆನ್ಸಿಟಿ 9000 ಪ್ರೊಸೆಸರ್, ಆ್ಯಂಡ್ರಾಯ್ಡ್ 13 ಓಎಸ್ ಹಾಗೂ 5000mAh ಬ್ಯಾಟರಿ, 120W ಫಾಸ್ಟ್ ಚಾರ್ಜಿಂಗ್ ಹೊಸ ಐಕ್ಯೂ ನಿಯೋ 7 5G ಸ್ಮಾರ್ಟ್‌ಫೋನ್‌ನಲ್ಲಿದೆ ಎಂದು ಕಂಪನಿ ತಿಳಿಸಿದೆ. ಹಿಂಭಾಗದಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಜತೆಗೆ 2+2 ಮೆಗಾಪಿಕ್ಸೆಲ್ ಕ್ಯಾಮೆರಾ ಹಾಗೂ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೂತನ ಸ್ಮಾರ್ಟ್‌ಫೋನ್‌ನ ವಿಶೇಷತೆಯಾಗಿದೆ. 10 | ಭಾರತದಲ್ಲಿ ಬಿಡುಗಡೆಯಾಯ್ತು ರಿಯಲ್‌ಮಿ ಹೊಸ ಸ್ಮಾರ್ಟ್‌ಫೋನ್ ಫೆಬ್ರುವರಿ 16ರಂದು ಅಮೆಜಾನ್ ಮೂಲಕ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಾಗಲಿದೆ. 11 5G: ಸ್ನ್ಯಾಪ್‌ಡ್ರ್ಯಾಗನ್ 8 ಪ್ರೊಸೆಸರ್ ಸಹಿತ ಹೊಸ ಸ್ಮಾರ್ಟ್‌ಫೋನ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.