3 – ಭಾರತದ ಬಾಹ್ಯಾಕಾಶ ಸಾಹಸದಲ್ಲಿ ಹೊಸ ಅಧ್ಯಾಯ: ಮೋದಿ, ಸಿದ್ದು ಮೆಚ್ಚುಗೆ ನವದೆಹಲಿ: ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯ (ಇಸ್ರೊ) ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನ –3 ಉಡ್ಡಯನ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ಇಂದು ಮಧ್ಯಾಹ್ನ 2.35 ಗಂಟೆಗೆ ಆಗಸಕ್ಕೆ ಹಾರಿತು. ರಾಕೆಟ್ ನಭಕ್ಕೆ ಚಿಮ್ಮುತ್ತಿದ್ದಂತೆ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಮುಖದಲ್ಲಿ ಸಂತಸ ಮೂಡಿತು. ರಾಕೆಟ್ ಉಡ್ಡಯನ ಯಶಸ್ವಿ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಚಂದ್ರಯಾನ-3 ಭಾರತದ ಬಾಹ್ಯಾಕಾಶ ಸಾಹಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. ಇದು ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ನಾನು ಅವರ ಚೈತನ್ಯ ಮತ್ತು ಜಾಣ್ಮೆಯನ್ನು ಅಭಿನಂದಿಸುತ್ತೇನೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವನ್ನೂ ಓದಿ... -3 | ನಿಗದಿತ ಕಕ್ಷೆ ಸೇರಿದ ಚಂದ್ರಯಾನ–3 ಚಂದ್ರಯಾನ–2 ಹಾಗೂ 3 : ಎರಡೂ ಯೋಜನೆಗಳ ವಿಶೇಷ ಇಲ್ಲಿದೆ 3: ಚಂದ್ರಯಾನ-3 ಉಡ್ಡಯನ ಯಶಸ್ವಿ, ವಿಜ್ಞಾನಿಗಳ ಮುಖದಲ್ಲಿ ಸಂತಸ -3 ' . , . ' . ! ://./gko6fnOUaK ಚಂದ್ರಯಾನ–3 ಯೋಜನೆಯನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದ ಇಸ್ರೊಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ದೇಶಕ್ಕೆ ಇದು ಹೆಮ್ಮೆಯ ಕ್ಷಣ ಎಂದು ಅವರು ನುಡಿದಿದ್ದಾರೆ. ಅಲ್ಲದೆ ಇದು ಭಾರತದ ಬಾಹ್ಯಾಕಾಶ ಸಂಶೋಧನೆ ಹಾಗೂ ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. @ Chandrayaan3 . ' & . .… ../k6UaEjPIN2 ರಾಷ್ಟ್ರಪತಿ ಅಭಿನಂಧನೆ -3 . @ ! ' … ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.