C31 | ದೇಶದ ಮಾರುಕಟ್ಟೆಗೆ ನೋಕಿಯಾ ಹೊಸ ಸ್ಮಾರ್ಟ್‌ಫೋನ್ ಬೆಂಗಳೂರು: ಎಚ್‌ಎಂಡಿ ಗ್ಲೋಬಲ್ ಒಡೆತನದ ನೋಕಿಯಾ, ದೇಶದ ಗ್ಯಾಜೆಟ್ ಮಾರುಕಟ್ಟೆಗೆ ನೂತನ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ನೋಕಿಯಾ ‘ಸಿ’ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸದಾಗಿ ನೋಕಿಯಾ C31 ಬಿಡುಗಡೆಯಾಗಿದೆ. ಹೊಸ ನೋಕಿಯಾ C31 ನೋಕಿಯಾ ನೂತನ ಸ್ಮಾರ್ಟ್‌ಫೋನ್ 6.7 ಇಂಚಿನ ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 3GB ಮತ್ತು 32GB ಹಾಗೂ 4GB ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಇದರಲ್ಲಿದೆ. ಜತೆಗೆ ಒಂದು ಬಾರಿ ಚಾರ್ಜಿಂಗ್ ಮಾಡಿದರೆ 3 ದಿನದವರೆಗೂ ಬ್ಯಾಟರಿಬಾಳಿಕೆ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ ಎಂದು ಕಂಪನಿ ತಿಳಿಸಿದೆ. ಬೆಲೆ ಮತ್ತು ಲಭ್ಯತೆ ಡಿ.15ರಿಂದ , ಹಾಗೂ ಬಣ್ಣದಲ್ಲಿ ಹೊಸ ನೋಕಿಯಾ ಸ್ಮಾರ್ಟ್‌ಫೋನ್ ದೊರೆಯಲಿದ್ದು, 3GB ಮತ್ತು 32GB ಸ್ಮಾರ್ಟ್‌ಫೋನ್‌ಗೆ ₹9,999 ಹಾಗೂ 4GB ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಸ್ಮಾರ್ಟ್‌ಫೋನ್‌ಗೆ ₹10,999 ರಷ್ಟಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.