ಸ್ಯಾಮ್‌ಸಂಗ್ ನೂತನ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ ಬಿಡುಗಡೆ ಬೆಂಗಳೂರು: ಗ್ಯಾಜೆಟ್ ಮಾರುಕಟ್ಟೆಗೆ ಸ್ಯಾಮ್‌ಸಂಗ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ. ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸದಾಗಿ A52s 5G ಪರಿಚಯಿಸಲ್ಪಟ್ಟಿದ್ದು, ಈ ಮೊದಲು ಮಾರ್ಚ್‌ನಲ್ಲಿ ಬಿಡುಗಡೆಯಾಗಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದೆ. ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್, ಸ್ನ್ಯಾಪ್‌ಡ್ರ್ಯಾಗನ್ 778 ಪ್ರೊಸೆಸರ್, 25W ಚಾರ್ಜಿಂಗ್ ಬೆಂಬಲ ಹೊಂದಿದೆ. 6 + 128 ಸ್ಟೋರೇಜ್ ಮಾದರಿಯಲ್ಲಿ ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಲಭ್ಯವಾಗುತ್ತಿದೆ. ಜತೆಗೆ ಓಸಮ್ ಕಪ್ಪು, ಬಿಳಿ, ನೇರಳೆ ಮತ್ತು ಮಿಂಟ್ ಬಣ್ಣದಲ್ಲಿ ದೊರೆಯಲಿದೆ. ಮಾರುಕಟ್ಟೆಗೆ ಬಂತು ಹೊಸ ನೋಕಿಯಾ ಸ್ಮಾರ್ಟ್‌ಫೋನ್ ಯುರೋಪ್ ಮಾರುಕಟ್ಟೆಯ ಬೆಲೆಗೆ ಹೋಲಿಸಿದರೆ, ದೇಶದಲ್ಲಿ ನೂತನ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಬೆಲೆ ಅಂದಾಜು ₹41,800 ಆಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯತೆ ಮತ್ತು ಬೆಲೆ ವಿವರವನ್ನು ಕಂಪನಿ ಇನ್ನಷ್ಟೇ ಬಹಿರಂಗಪಡಿಸಬೇಕಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A22 ಬಿಡುಗಡೆ: ಬೆಲೆ ಮತ್ತು ಲಭ್ಯತೆ ವಿವರ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.