S24 | ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಐಟೆಲ್‌ ನವದೆಹಲಿ: ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್‌() ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ S24 ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ ಫೋನ್‌ 90Hz 6.6 ಇಂಚಿನ + ಪಂಚ್-ಹೋಲ್ ಡಿಸ್‌ಪ್ಲೇಯನ್ನು ಹೊಂದಿದ್ದು, ಉತ್ತಮ ಕ್ಯಾಮರಾ, ದೀರ್ಘ ಬಾಳಿಕೆಯ ಬ್ಯಾಟರಿ ಸೇರಿದಂತೆ ಹಲವು ಆಕರ್ಷಕ ಫೀಚರ್‌ಗಳನ್ನು ಒಳಗೊಂಡಿರಲಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಎರಡು ಬಣ್ಣಗಳಲ್ಲಿ ಲಭ್ಯವಿರುವ ಈ ಫೋನ್‌ನ ಹಿಂಬದಿ ಕ್ಯಾಮರಾ 180MP(ಡ್ಯುಯಲ್ ಕ್ಯಾಮರಾ) ಹಾಗೂ ಸೆಲ್ಫಿ ಕ್ಯಾಮರಾ 8MP ಇದೆ. 5000mAH ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸಾಮರ್ಥ್ಯ ಹೊಂದಿದೆ. S24 ಮೊಬೈಲ್‌ 16GB* ( ) + 128GB ಸೌಲಭ್ಯ ಹೊಂದಿದೆ. ಹೊಸ ಸ್ಮಾರ್ಟ್‌ಫೋನ್‌ನ ಬೆಲೆ ₹9,999 ಇದ್ದು, ಸದ್ಯ ಅಮೆಜಾನ್‌ನಲ್ಲಿ ಲಭ್ಯವಿದೆ. ಸ್ಮಾರ್ಟ್‌ಫೋನ್‌ ಜೊತೆಗೆ ಸ್ಮಾರ್ಟ್‌ ವಾಚ್‌ ಅನ್ನು ಉಡುಗೊರೆಯಾಗಿ ಸಿಗಲಿದೆ. ಏಪ್ರಿಲ್ ಕೊನೆಯ ವಾರ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.