ಮತ್ತೊಂದು ಡಿಜಿಟಲ್ ಕ್ರಾಂತಿ! 5ಜಿ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 5ಜಿ ದೂರಸಂಪರ್ಕ ಸೇವೆಗಳಿಗೆ ಶನಿವಾರ ಚಾಲನೆ ನೀಡಲಿದ್ದಾರೆ. ಅವರು ಆಯ್ದ ನಗರಗಳಲ್ಲಿ ಈ ಸೇವೆಗೆ ಚಾಲನೆ ನೀಡಲಿದ್ದು, ಎರಡು ವರ್ಷಗಳಲ್ಲಿ ಇದು ಇಡೀ ದೇಶದಲ್ಲಿ ಹಂತ ಹಂತವಾಗಿ ಲಭ್ಯವಾಗಲಿದೆ. 5ಜಿ ಸೇವೆಗಳು ಆರಂಭವಾದ ನಂತರದಲ್ಲಿ ಹೊಸ ಆರ್ಥಿಕ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆ ಇದೆ. 5ಜಿ ತಂತ್ರಜ್ಞಾನವು 4ಜಿ ತಂತ್ರಜ್ಞಾನಕ್ಕಿಂತ ಹಲವು ಪಟ್ಟು ಹೆಚ್ಚು ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸುತ್ತದೆ. ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೊ, ಸುನೀಲ್ ಭಾರ್ತಿ ಮಿತ್ತಲ್ ಮಾಲೀಕತ್ವದ ಭಾರ್ತಿ ಏರ್‌ಟೆಲ್‌ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು 5ಜಿ ಸೇವೆಗಳನ್ನು ಆರಂಭಿಸಲು ಅಗತ್ಯವಿರುವ ತರಂಗಾಂತರಗಳನ್ನು ಹರಾಜಿನ ಮೂಲಕ ಖರೀದಿಸಿವೆ. ಖಾಸಗಿ ನೆಟ್‌ವರ್ಕ್‌ ಸ್ಥಾಪಿಸಲು ಅಗತ್ಯವಿರುವ 5ಜಿ ತರಂಗಾಂತರಗಳನ್ನು ಅದಾನಿ ಸಮೂಹ ಖರೀದಿ ಮಾಡಿದೆ. ಇವನ್ನೂ ಓದಿ... *ಬರುತ್ತಿದೆ 5ಜಿ: ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಸಿಮ್ ಕಾರ್ಡ್ ಬದಲಿಸಬೇಕೇ? * 5G | ಬರಲಿದೆ ರಿಲಯನ್ಸ್ ಜಿಯೊ ಫೋನ್ 5G *ಸಂಪಾದಕೀಯ | 5ಜಿ ತರಂಗಾಂತರ ಹರಾಜು ಟೆಲಿಕಾಂ ವಲಯದ ದಾಪುಗಾಲು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.