ಬಿಜೆಪಿಯ ಭೀಷ್ಮನಿಗೆ ಹುಟ್ಟುಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬಿಎಸ್ವೈ
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು ಹೇಳಿದ್ದಾರೆ.
ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್‌ನಲ್ಲಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದ ಅಡ್ವಾಣಿ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಅವರು “ಜೀವಂತ ಸ್ಫೂರ್ತಿ” ಎಂದಿದ್ದಾರೆ.
ಇದೇ ವೇಳೆ ಅಡ್ವಾಣಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಹಾರೈಸಿದ್ದಾರೆ. ಅಡ್ವಾಣಿ ಬಿಜೆಪಿಯ ದೀರ್ಘಕಾಲ ಸೇವೆ ಸಲ್ಲಿಸಿದ ಅಧ್ಯಕ್ಷರಾಗಿದ್ದು, ತಮ್ಮ ಪಕ್ಷವು ರಾಷ್ಟ್ರರಾಜಕಾರಣದಲ್ಲಿ ಹೆಮ್ಮರವಾಗಿ ಬೆಳೆಯಲು 90 ರ ದಶಕದಲ್ಲಿ ಅಧಿಕಾರಕ್ಕೆ ಬರಲು ಮಹತ್ವದ ಕೊಡುಗೆ ಸಲ್ಲಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜನ್ಮ ದಿನದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಸಚಿವ ಶ್ರೀರಾಮುಲು ಶುಭ ಕೋರಿ, ಮುತ್ಸದ್ಧಿ ರಾಜಕಾರಣಿ, ಭಾರತದ 7ನೇ ಉಪ ಪ್ರಧಾನಿ, ತತ್ವನಿಷ್ಠ ನಾಯಕ, ಭಾರತೀಯ ಜನತಾ ಪಕ್ಷದ ಅಗ್ರಗಣ್ಯ ನೇತಾರರಲ್ಲೊಬ್ಬರಾದ ಎಲ್‌ ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿ ದ್ದಾರೆ.