ಕುತೂಹಲ ಹುಟ್ಟಿಸಿದ ಮೋದಿ ಟ್ವೀಟ್: ಇಂದು ಸಂಜೆ ಭಾಷಣ
ನವದೆಹಲಿ:ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ದೇಶಾದ್ಯಂತ ಕುತೂಹಲ ಮೂಡಿಸಿದೆ.
ಮಂಗಳವಾರ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡ ಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ.
ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿಲ್ಲ.

