ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಕಡೆಗಣನೆ: ಕಿಡಿಕಾರಿದ ಕೇಂದ್ರ ಸಚಿವ
ನವದೆಹಲಿ:ರಾಜ್ಯ ಸರ್ಕಾರದ ವತಿಯಿಂದ ಚಾಣುಕ್ಯಪುರಿ ಮಾರ್ಗ್‍ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ಶಂಕುಸ್ಥಾಪನೆಗೆ ಆಹ್ವಾನ ನೀಡದಿರುವ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ.
ಶುಕ್ರವಾರ ಸರ್ಕಾರದ ವತಿಯಿಂದ ಕರ್ನಾಟಕ ಭವನ-1(ಕಾವೇರಿ) ನಿರ್ಮಾಣಕ್ಕೆ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿತ್ತು. ಶಿಷ್ಟಾ ಚಾರದ ಪ್ರಕಾರ ರಾಜ್ಯ ಸರ್ಕಾರ ಕೇಂದ್ರವನ್ನು ಪ್ರತಿನಿಧಿಸುವ ಸಚಿವರನ್ನು ಆಹ್ವಾನ ಕೊಡಬೇಕಿತ್ತು. ಆಮಂತ್ರಣ ಪತ್ರಿಕೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಪ್ರಹ್ಲಾದ್ ಜೋಷಿ ಹೆಸರು ಮುದ್ರಣ ಮಾಡದೆ ಕಾರ್ಯಕ್ರಮಕ್ಕೆ ಆಹ್ವಾನವೂ ಕೊಟ್ಟಿರಲಿಲ್ಲ.
ಇದರಿಂದ ಅಸಮಾಧಾನಗೊಂಡ ಪ್ರಹ್ಲಾದ್ ಜೋಷಿ, ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆಯಲು ಮುಂದಾದರು. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮನವೊಲಿಸಿ ಕಾರ್ಯಕ್ರಮಕ್ಕೆ ಕರೆತರುವಲ್ಲಿ ಯಶಸ್ವಿಯಾದರು.