ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ನಾಲ್ವರ ಸಾವು, ಇಬ್ಬರಿಗೆ ಗಾಯ
ಲಖನೌ:ಉತ್ತರ ಪ್ರದೇಶದ ಇಟಾವಾದ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ದೆಹಲಿಯಿಂದ ಹಮೀರ್‌ಪಿರ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯ ಶ್ಯಾಮ್​ ಪ್ರಸಾದ್ ಮಾತನಾಡಿ​, ಇಟಾವಾಹ್‌ನ ಇಕ್ದಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿ ದ್ದಾರೆ. ಚಾಲಕ ನಿದ್ರೆಗೆ ಜಾರಿದದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಗುರುತನ್ನು ಪತ್ತೆಹಚ್ಚುತ್ತಿದ್ದಾರೆ.
ಬುಧವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ.