ಗುರ್ಮೀತ್ ರಾಮ್​ ರಹೀಮ್’ಗೆ 21 ದಿನ ಫರ್ಲೋ
ನವದೆಹಲಿ:ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್ ಮತ್ತೆ ಫರ್ಲೋ ಮೇಲೆ ಹೊರಬಂದಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಇದು ಹತ್ತನೇ ಬಾರಿ ಅವರು ಫರ್ಲೋ() ಮೂಲಕ ಹೊರಬರುತ್ತಿರುವುದು. 21 ದಿನಗಳ ಕಾಲ ರಿಲೀಫ್‌ ಪಡೆದಿರುವ ಗುರ್ಮೀತ್ ರಾಮ್​ ರಹೀಮ್ ಮಂಗಳವಾರ ಬೆಳಗ್ಗೆ ಜೈಲಿನಿಂದ ಹೊರ ಬಂದಿದ್ದಾರೆ. ಮೂಲಗಳ ಪ್ರಕಾರ ಉತ್ತರಪ್ರದೇಶದ ಭಾಗ್‌ಪಟ್‌ ಜಿಲ್ಲೆಯಲ್ಲಿರುವ ಡೇರಾ ಸಚ್ಚಾ ಸೌಧ ಆಶ್ರಮದಲ್ಲಿ ಅವರು ತಂಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಎಂಟು ಪ್ರತ್ಯೇಕ ಸಂದರ್ಭಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರಾಮ್‌ ರಹೀಮ್‌ ಅಕ್ಟೋಬರ್ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಗುರ್ಮೀತ್ ರಾಮ್ ರಹೀಮ್ ದೋಷಿ ಎಂದು ತೀರ್ಪು ನೀಡಿತ್ತು.