12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ
ನವದೆಹಲಿ:ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ನಾಮಪತ್ರ ಹಿಂಪಡೆಯಲು ಆ.26 ರಿಂದ 27 ಕೊನೆಯ ದಿನವಾಗಿದೆ.
ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೊವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ಹತ್ತು ಸ್ಥಾನಗಳು ಖಾಲಿಯಾಗಿವೆ. ಸದಸ್ಯರು ರಾಜೀನಾಮೆ ನೀಡಿದ ನಂತರ ಎರಡು ಸ್ಥಾನಗಳು ಖಾಲಿ ಉಳಿದಿವೆ.
12 ಸ್ಥಾನಗಳ ಪೈಕಿ ಅಸ್ಸಾಂ, ಬಿಹಾರ ಮತ್ತು ಮಹಾರಾಷ್ಟ್ರದ ತಲಾ 2 ಸ್ಥಾನಗಳಿವೆ. ಮತ್ತು ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರಾ, ತೆಲಂಗಾಣ ಮತ್ತು ಒಡಿಶಾದಿಂದ ತಲಾ 1.