ಆರ್ಮ್‌ಸ್ಟ್ರಾಂಗ್ ಹತ್ಯೆ ವಿರೋಧಿಸಿ ಚೆನ್ನೈನಲ್ಲಿ ಬಿಎಸ್‌ಪಿ ಪ್ರತಿಭಟನೆ
ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಆರು ಮಂದಿಯ ಗ್ಯಾಂಗ್ ಶುಕ್ರವಾರ ಚೆನ್ನೈನಲ್ಲಿ ಅವರ ಮನೆಯ ಸಮೀಪವೇ ಹತ್ಯೆ ಮಾಡಿತ್ತು. ಚೆನ್ನೈ ಕಾರ್ಪೊರೇಷನ್‌ನ ಮಾಜಿ ಕೌನ್ಸಿಲರ್ ಆಗಿದ್ದ ಆರ್ಮ್‌ಸ್ಟ್ರಾಂಗ್ ಅವರ ಮೇಲೆ ಪೆರಂಬೂರ್‌ನಲ್ಲಿರುವ ಅವರ ಮನೆಯ ಸಮೀಪವೇ ದಾಳಿ ನಡೆಸಿ ಪರಾರಿಯಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆರ್ಮ್‌ಸ್ಟ್ರಾಂಗ್ ಮೃತಪಟ್ಟಿದ್ದಾರೆ.
ಆರೋಪಿಗಳನ್ನು ಬಂಧಿಸಲು ಪೊಲೀಸರು 10 ತಂಡಗಳನ್ನು ರಚಿಸಿದ್ದಾರೆ ಎಂದು ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗಾರ್ಗ್ ತಿಳಿಸಿದರು.
“ನಾವು ಇದುವರೆಗೆ ಎಂಟು ಶಂಕಿತರನ್ನು ಬಂಧಿಸಿದ್ದೇವೆ. ಇದು ಆರಂಭಿಕ ತನಿಖೆ, ಪ್ರಾಥಮಿಕ ತನಿಖೆಯಾಗಿದೆ. ಆದ್ದರಿಂದ ಸ್ವಲ್ಪ ಸಮಯದ ನಂತರ, ಹೆಚ್ಚಿನ ಸತ್ಯಗಳು ಮತ್ತು ಸಂದರ್ಭಗಳು ಬೆಳಕಿಗೆ ಬರುವುದರೊಂದಿಗೆ ಸ್ಪಷ್ಟ ಮತ್ತು ಸರಿಯಾದ ಚಿತ್ರಣ ಹೊರಹೊಮ್ಮುತ್ತದೆ” ಎಂದು ಗಾರ್ಗ್ ಹೇಳಿದ್ದಾರೆ.
ಆರ್ಮ್‌ಸ್ಟ್ರಾಂಗ್ ಹತ್ಯೆಯ ಹಿಂದೆ ಕೆಲವು “ಎರಡರಿಂದ ಮೂರು ಅನುಮಾನಾಸ್ಪದ ಉದ್ದೇಶಗಳು” ಇವೆ ಎಂದು ಪೊಲೀಸರು ಶಂಕಿಸಿದ್ದಾರೆ ಆದರೆ ಶಂಕಿತರ ವಿಚಾರಣೆಯ ನಂತರವೇ ನಿಖರವಾದ ಕಾರಣ ಬೆಳಕಿಗೆ ಬರಲಿದೆ ಎಂದು ಗಾರ್ಗ್ ಹೇಳಿದರು.