ಮೆಕ್​ ಡೊನಾಲ್ಡ್ಸ್​ ಸ್ಫೋಟಿಸುವ ಬೆದರಿಕೆ: ಮುಂಬೈ ಪೊಲೀಸರು ಅಲರ್ಟ್
ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.