 : ಇನ್‌ಸ್ಪೈರ್ ಮಾನಕ್ ಅವಾರ್ಡ್ ರಾಷ್ಟ್ರಮಟ್ಟದ ಸ್ಪರ್ಧೆ; ಕರ್ನಾಟಕದ ವಿದ್ಯಾರ್ಥಿನಿಯರ ಸಾಧನೆ
ಬೆಂಗಳೂರು:ಕೇಂದ್ರ ಸರ್ಕಾರದ ( ) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ನ್ಯಾಷನಲ್ ಇನ್ನೋವೇಷನ್ ಫೌಂಡೇಷನ್ ಸಹಯೋಗದೊಂದಿಗೆ ನವದೆಹಲಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಇನ್‌ಸ್ಪೈರ್ ಮಾನಕ್ ಅವಾರ್ಡ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಂಚಿನ ಪದಕದೊಂದಿಗೆ ಎರಡು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ( ) ಕರ್ನಾಟಕದಿಂದ () ಒಟ್ಟು 39 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅತಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ ರಾಜ್ಯ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗ್ರಾಮೀಣ ಪ್ರದೇಶದ ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮೂಲ್ಯ ಹೆಗ್ಡೆ ಸಿದ್ಧಪಡಿಸಿದ “  * ” ಮಾದರಿಯನ್ನು ಪ್ರದರ್ಶಿಸಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದುದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ವಲಯ-04ರಲ್ಲಿರುವ ವೈದೇಹಿ ಸ್ಕೂಲ್ ಆಫ್ ಎಕ್ಸಲೆನ್ಸ್ ಬೆಂಗಳೂರು ಶಾಲೆಯ ವಿದ್ಯಾರ್ಥಿನಿ ಈಶ್ವರಿ ಮೋರೆ ಸಿದ್ಧಪಡಿಸಿರುವ “       ” ಮಾದರಿಯನ್ನು ಪ್ರದರ್ಶಿಸಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ಈ ಸುದ್ದಿಯನ್ನೂ ಓದಿ |   : ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜತೆ ಚರ್ಚೆ; ಲಕ್ಷ್ಮೀ ಹೆಬ್ಬಾಳಕರ್
ವಿದ್ಯಾರ್ಥಿನಿಯರ ಈ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದು ಶ್ಲಾಘನೀಯವಾಗಿದೆಯೆಂದು ಡಿ.ಎಸ್.ಇ.ಆರ್.ಟಿ. ನಿರ್ದೇಶಕ ಗೋಪಾಲಕೃಷ್ಣ ಎಚ್.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.