 : ತಲೈವಾ ಆರೋಗ್ಯ ಸ್ಥಿತಿ ಬಗ್ಗೆ ಪತ್ನಿ ಲತಾರಿಂದ ಬಿಗ್‌ ಅಪ್ಡೇಟ್ಸ್‌
ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಸೂಪರ್ ಸ್ಟಾರ್ ರಜನಿಕಾಂತ್ ( ) ಆಸ್ಪತ್ರೆಗೆ ದಾಖಲಾಗಿದ್ದು, ಕೋಟ್ಯಂತರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಈ ಮಧ್ಯೆ ರಜಿನಿಕಾಂತ್‌ ಪತ್ನಿ ಲತಾ ರಜಿನಿಕಾಂತ್‌( ) ಅವರು ತಲೈವಾ ಆರೋಗ್ಯ ಸ್ಥಿತಿ ಬಗ್ಗೆ ಮಹತ್ವದ ಮಾಹಿಯೊಂದನ್ನು ಹಂಚಿಕೊಂಡಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಲೈವಾ ‍ಸ್ಥಿತಿ ಸ್ಥಿರವಾಗಿದೆ ಎಂದು ಅವರ ಪತ್ನಿ ಲತಾ ಮಾಹಿತಿ ನೀಡಿದ್ದಾರೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜಿನಿಕಾಂತ್‌ ಅವರನ್ನು  ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೋಮವಾರ ರಾತ್ರಿ ಏಕಾಏಕಿ ದಾಖಲಿಸಲಾಗಿದೆ. 73 ವರ್ಷದ ನಟನ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಗಳ ಮೂಲಗಳು ತಿಳಿಸಿವೆ.  ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರು ನಟನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ ಅವರಿ ವಿಶೇಪ ಪರೀಕ್ಷೆ ಮಾಡಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.
ಈ ನಡುವೆ ನೆಚ್ಚಿನ ನಾಯಕ ಅಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸಾಮಾಜಿಕ ಜಾಲತಾಣದ ಮೂಲಕ ತಲೈವಾ ಬೇಗ ಗುಣಮುಖರಾಗಿಬನ್ನಿ ಎಂದು ಅನೇಕರು ಹಾರೈಸಿದ್ದರು. ಇದೀಗ ರಜಿನಿ ಪತ್ನಿ ಲತಾ ತಲೈವಾ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಮಾಧ್ಯಮದ ಜತೆ ಮಾಹಿತಿ ಹಂಚಿಕೊಂಡಿದ್ದು, ಕೋಟ್ಯಂತರ ಅಭಿಮಾನಿಗಳ ಹಾರೈಕೆಯಿಂದ ರಜಿನಿಕಾಂತ್‌ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಅದೇಷ್ಟೋ ಅಭಿಮಾನಗಳು ಅವರು ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಭಿಮಾನಿಗಳ ಪ್ರೀತಿ, ಹಾರೈಕೆಯಿಂದಾಗಿಯೇ ಅವರು ಬೇಗ ಚೇತರಿಸಿಕೊಳ್ಳಲು ಸಾಧ್ಯವಾಯಿತು. ಎಲ್ಲರಿಗೂ ಧನ್ಯವಾದಗಳು ಎಂದು ಲತಾ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಲೈವರ್” ಎಂದು ಪ್ರೀತಿಯ ಹೆಸರು ಹೊಂದಿರುವ ರಜನಿಕಾಂತ್ ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರು. ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನವನ್ನು ಹೊಂದಿದ್ದರು. ಅವರ ಇತ್ತೀಚಿನ ಸಿನಿಮಾ ಆಕ್ಷನ್-ಕಾಮಿಡಿ ಜೈಲರ್. ಆಗಸ್ಟ್ 9, 2023 ರಂದು ಬಿಡುಗಡೆಯಾಗಿತ್ತು. ಅದು ಬಾಕ್ಸ್ ಆಫೀಸ್‌ನಲ್ಲಿ ಗೆದ್ದಿತ್ತು.ರಜನಿಕಾಂತ್ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ‘ವೆಟ್ಟೈಯಾನ್’ ನ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. .ಅವರು ವೈರಲ್ ಡಾನ್ಸ್ ಮಾಡಿದ್ದರು. ಟಿಜೆ ಜ್ಞಾನವೇಲ್ ನಿರ್ದೇಶನದ ವೆಟ್ಟೈಯನ್ ಆಕ್ಷನ್ ಪ್ಯಾಕ್ಡ್ ಮನರಂಜನಾ ಚಿತ್ರವಾಗಿದೆ. ಅಕ್ಟೋಬರ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಆಡಿಯೋ ಬಿಡುಗಡೆ ಸಮಾರಂಭದಲ್ಲಿ, ರಜನಿಕಾಂತ್ ತಮ್ಮ ಸಿಗ್ನೇಚರ್ ಹೆಜ್ಜೆಗಳನ್ನು ಹಾಕಿದ್ದರು. ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಲೇ ಇದ್ದಾರೆ.
ಈ ಸುದ್ದಿಯನ್ನೂ ಓದಿ:  : ಸೂಪರ್‌ಸ್ಟಾರ್ ರಜನಿಕಾಂತ್‌ ಆಸ್ಪತ್ರೆಗೆ ದಾಖಲು