ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ವಕೀಲ ಎಸ್‌ಜಿ ಮೆಹ್ತಾ
ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.
ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಎಂದು ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವು ದಲ್ಲ, ಅಫಿಡವಿಟ್ ಸಲ್ಲಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.