  : ಸೂಪರ್‌ಸ್ಟಾರ್ ರಜನಿಕಾಂತ್‌ ಆಸ್ಪತ್ರೆಗೆ ದಾಖಲು
ಚೆನ್ನೈ:ಸೂಪರ್ ಸ್ಟಾರ್ ರಜನಿಕಾಂತ್ ( ) ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೋಮವಾರ ರಾತ್ರಿ ಏಕಾಏಕಿ ದಾಖಲಿಸಲಾಗಿದೆ. 73 ವರ್ಷದ ನಟನ  ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಗಳ ಮೂಲಗಳು ತಿಳಿಸಿವೆ. ನೆಲ್ಸನ್ ದಿಲೀಪ್ ಕುಮಾರ್ ಅವರ ಜೈಲರ್ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ನಟ ಹೊಟ್ಟೆ ನೋವಿನ ಕಾರಣಕ್ಕೆ ಸೋಮವಾರ ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರು ನಟನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ ಅವರಿ ವಿಶೇಪ ಪರೀಕ್ಷೆ  ಮಾಡಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.
“ತಲೈವರ್” ಎಂದು ಪ್ರೀತಿಯ ಹೆಸರು ಹೊಂದಿರುವ ರಜನಿಕಾಂತ್ ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರು.  ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನವನ್ನು ಹೊಂದಿದ್ದರು. ಅವರ ಇತ್ತೀಚಿನ ಸಿನಿಮಾ ಆಕ್ಷನ್-ಕಾಮಿಡಿ ಜೈಲರ್. ಆಗಸ್ಟ್ 9, 2023 ರಂದು ಬಿಡುಗಡೆಯಾಗಿತ್ತು. ಅದು  ಬಾಕ್ಸ್ ಆಫೀಸ್‌ನಲ್ಲಿ ಗೆದ್ದಿತ್ತು.
ಇದನ್ನೂ ಓದಿ:   11: ಬಿಗ್‌ಬಾಸ್‌‌‌ನಲ್ಲಿ ಫ್ಯಾಷನ್‌ ಪ್ರಿಯರ ಮನಗೆದ್ದಿದೆ ಸುದೀಪ್‌ ಸೂಟ್‌! ಇದರ ದರ ಎಷ್ಟು?
ರಜನಿಕಾಂತ್ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ‘ವೆಟ್ಟೈಯಾನ್’ ನ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. .ಅವರು  ವೈರಲ್ ಡಾನ್ಸ್ ಮಾಡಿದ್ದರು. ಟಿಜೆ ಜ್ಞಾನವೇಲ್ ನಿರ್ದೇಶನದ ವೆಟ್ಟೈಯನ್ ಆಕ್ಷನ್ ಪ್ಯಾಕ್ಡ್ ಮನರಂಜನಾ ಚಿತ್ರವಾಗಿದೆ. ಅಕ್ಟೋಬರ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಆಡಿಯೋ ಬಿಡುಗಡೆ ಸಮಾರಂಭದಲ್ಲಿ, ರಜನಿಕಾಂತ್ ತಮ್ಮ ಸಿಗ್ನೇಚರ್  ಹೆಜ್ಜೆಗಳನ್ನು ಹಾಕಿದ್ದರು. ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಲೇ ಇದ್ದಾರೆ.