  : ಇಂದಿನ ಹವಾಮಾನ ವರದಿ; ಶಿವಮೊಗ್ಗ , ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು:ಸೆ.230ರಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ( ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಭಾನುವಾರ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಸೆ.30ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:   11: ಬಿಗ್‌ ಬಾಸ್‌ ಮನೆಗೆ ಕಾಲಿಟ್ಟ ಕೆಜಿಗಟ್ಟಲೆ ಚಿನ್ನ  ಧರಿಸುವ ಗೋಲ್ಡ್‌ ಸುರೇಶ್‌; ಏನಿವರ ಹಿನ್ನೆಲೆ?
ಅ.1ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ  ಅ.3ರವರೆಗೆ ಮುಂದುವರಿಯಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 °  ಮತ್ತು 20°  ಆಗಿರಬಹುದು.