ಇಂದು ಸಂಜೆ ನಿತೀಶ್ ಕುಮಾರ್ ರಾಜೀನಾಮೆ..?
ಪಾಟ್ನಾ:ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿರುಕು ಮೂಡಿದ್ದು, ಮುಖ್ಯ ಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೋಟದ ಜೊತೆ ಕೈ ಜೋಡಿಸಲು ಮುಂದಾಗಿದ್ದು, ಇಂದು ಸಂಜೆ 7 ಗಂಟೆಗೆ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಎನ್ ಡಿಎ ಬೆಂಬಲದೊಂದಿಗೆ ನಾಳೆ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಯು ನಾಯಕರು ನಿತೀಶ್ ಕುಮಾರ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಆರ್ ಜೆಡಿ ಹಾಗೂ ಕಾಂಗ್ರೆಸ್ ತಮ್ಮ ಶಾಸಕರ ಸಭೆ ಕರೆದಿವೆ.