ಮರಾಠ ಪ್ರತಿಭಟನಕಾರರ ಉಪವಾಸ ಸತ್ಯಾಗ್ರಹ ವಾಪಸ್
ಮುಂಬೈ:ಮರಾಠ ಮೀಸಲಾತಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮರಾಠ ಪ್ರತಿಭಟನಕಾರರು ಶನಿವಾರ ಉಪವಾಸ ಸತ್ಯಾಗ್ರಹ ವನ್ನು ಹಿಂತೆಗೆದುಕೊಂಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂಗೆ ನೇತೃತ್ವದಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭವಾಗಿತ್ತು. ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ಮನೋಜ್ ಜಾರಾಂಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಕೆಲವೇ ಗಂಟೆಗಳಲ್ಲಿ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಾರಾಂಗೆ ಪ್ರಕಟಿಸಿದರು.
ಸಿ.ಎಂ ಏಕನಾಥ್‌ ಶಿಂಧೆ ಅವರು ಜಾರಾಂಗೆ ಅವರಿಗೆ ಜ್ಯೂಸ್‌ ನೀಡಿದರು. ಅದನ್ನು ಸ್ವೀಕರಿಸಿದ ಜಾರಾಂಗೆ ಸತ್ಯಾಗ್ರಹ ಹಿಂಪಡೆಯಲಾಗಿದೆ ಎಂದು ಘೋಷಣೆ ಮಾಡಿದರು.
ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಭರವಸೆ ನೀಡಿದ್ದರಿಂದ ಸತ್ಯಾಗ್ರಹ ವಾಪಾಸು ಪಡೆಯಲಾಗಿದೆ ಎಂದು ಪ್ರತಿಭಟನೆಯ ಮುಖಂಡರೊಬ್ಬರು ಹೇಳಿದ್ದಾರೆ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು.