ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ
ನವದೆಹಲಿ:ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತ ವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ, ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೆ ಇ- ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿರುವುದಾಗಿ ಶೆಟ್ಟರ್ ಹೇಳಿದ್ದಾರೆ.