  : ತಮ್ಮನ್ನುಅಧಿಕಾರದಿಂದ ಇಳಿಸುವ ಶಪಥ ಮಾಡಿದ್ದ ಖರ್ಗೆಗೆ ಫೋನ್ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ನವದೆಹಲಿ:ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಚುನಾವಣಾ ಸಭೆಯಲ್ಲಿ ಅಸ್ವಸ್ಥಗೊಂಡ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ( ) ಅವರಿಗೆ ಪ್ರಧಾನಿ ನರೇಂದ್ರ ಮೋದಿ  ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಅಚ್ಚರಿಯೆಂದರೇ ಅದೇ ಸಭೆಯಲ್ಲಿ ಖರ್ಗೆ ಅವರು ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯದೇ ಸಾಯುವುದಿಲ್ಲ ಎಂದು ಅನಾರೋಗ್ಯದ ನಡುವೆ ಹೇಳಿಕೆ ನೀಡಿದ್ದರು. ಸಂಜೆಯಷ್ಟರಲ್ಲಿ ಪ್ರಧಾನಿ ಮೋದಿ  ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದರು.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜಸ್ರೋಟಾ ಬೆಲ್ಟ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೆ ಒಳಗಾಗಿದ್ದರು.  ತಪಾಸಣೆಯ ನಂತರ ಖರ್ಗೆ ಈಗ ಸ್ಥಿರವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಎಐಸಿಸಿ ಅಧ್ಯಕ್ಷ ಖರ್ಗೆ ಅವರಿಗೆ ಕರೆ ಮಾಡಿ ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ತಮ್ಮ ಆರೋಗ್ಯದ ಭೀತಿಯ ಹೊರತಾಗಿಯೂ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕಾಂಗ್ರೆಸ್ ಹೋರಾಡುತ್ತದೆ” ಎಂದು ಪ್ರತಿಪಾದಿಸಿದರು. ಈ ಉದ್ದೇಶಕ್ಕಾಗಿ ಅವರ ಸಮರ್ಪಣೆಯು ಈ ಪ್ರದೇಶದ ಜನರ ಹಕ್ಕುಗಳು ಮತ್ತು ಆಕಾಂಕ್ಷೆಗಳಿಗಾಗಿ ಪ್ರತಿಪಾದಿಸುವ ಪಕ್ಷದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( ) ಅವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾದ ಘಟನೆ ನಡೆದಿದೆ. ಕಥುವಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಈ ಘಟನೆ ನಡೆದಿದೆ. ಖರ್ಗೆ ಅವರ ಸ್ಥಿತಿಯನ್ನು ನೋಡಿದ ವೇದಿಕೆಯಲ್ಲಿದ್ದ ಹಲವಾರು ನಾಯಕರು ಅವರಿಗೆ ನೆರವಾದರು.
ಅನಾರೋಗ್ಯದ ಹೊರತಾಗಿಯೂ ಖರ್ಗೆ ತಮ್ಮ ಭಾಷಣ ಮುಂದುವರಿಸಿದರು. ನಾವು ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಹೋರಾಡುತ್ತೇವೆ. ನನಗೆ 83 ವರ್ಷ ವಯಸ್ಸು, ನಾನು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು.ಕಥುವಾದ ಜಸ್ರೋಟಾದಲ್ಲಿ ಪಕ್ಷದ ಪರವಾಗಿ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಜನರು (ಕೇಂದ್ರ ಸರ್ಕಾರ) ಎಂದಿಗೂ ಚುನಾವಣೆಗಳನ್ನು ನಡೆಸಲು ಬಯಸಲಿಲ್ಲ. ಅವರು ಬಯಸಿದ್ದರೆ ಒಂದೆರಡು ವರ್ಷಗಳಲ್ಲಿ ಮಾಡುತ್ತಿದ್ದರು. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಪ್ರಾರಂಭಿಸಿದ್ದಾರೆ. ಚುನಾವಣೆ ಬೇಕಿರಲಿಲ್ಲ. ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ರಿಮೋಟ್ ಕಂಟ್ರೋಲ್ ಸರ್ಕಾರವನ್ನು ನಿರ್ವಹಿಸಲು ಬಯಸಿದ್ದರು ಎಂದು ದೂರಿದರು.
ಇದನ್ನೂ ಓದಿ:  : ಸೋಲೂರು ನೆಲಮಂಗಲಕ್ಕೆ ಸೇರ್ಪಡೆಯಾಗುತ್ತಿರುವುದು ನಮ್ಮ ಬದ್ಧತೆಯಿಂದ: ಡಿ.ಕೆ ಶಿವಕುಮಾರ್
ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ದೇಶದ ಯುವಕರಿಗೆ ಏನನ್ನೂ ನೀಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಾರದು. ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಒಳಿತು ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂದು ಅವರನ್ನು ಕೇಳಿ ನೋಡಿ ಎಂದು ಹೇಳಿದರು.