ಟೀ ಅಂಗಡಿಗೆ ನುಗ್ಗಿದ ಲಾರಿ: ಮಹಿಳೆ ಸೇರಿ ಐವರ ಸಾವು
ಸಿಮೆಂಟ್ ತುಂಬಿದ್ದ ಲಾರಿ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ, ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟೀ ಅಂಗಡಿಗೆ ನುಗ್ಗಿದೆ.
ವಾಹನಗಳಲ್ಲಿ ಓಶಕ್ತಿ ದೇವಸ್ಥಾನ ಹಾಗೂ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುತ್ತಿದ್ದ ಭಕ್ತರಿದ್ದರು. ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.