ಡಿ.8ರಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಪ್ರಮಾಣ ವಚನ ಸ್ವೀಕಾರ
ನವದೆಹಲಿ:ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಅವರು ಡಿ.8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಐಜ್ವಾಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಲಾಲ್ದುಹೋಮಾ ಅವರು ಇಂದು ರಾತ್ರಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.
ಸತತ ಎರಡನೆಯ ಬಾರಿಗೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಇದ್ದ ಎಂಎನ್‌ಎಫ್‌ ಪಕ್ಷವು 10 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ. ಕಾಂಗ್ರೆಸ್ ಪಕ್ಷವು ಒಂದು ಸ್ಥಾನ ಮಾತ್ರ ಗೆದ್ದು, ತೀವ್ರ ಹಿನ್ನಡೆ ಅನುಭವಿಸಿದೆ. ಒಂದು ಕಾಲದಲ್ಲಿ ಮಿಜೋರಾಂ ರಾಜ್ಯವು ಕಾಂಗ್ರೆಸ್ಸಿನ ಭದ್ರ ನೆಲೆಯೂ ಆಗಿತ್ತು.
2018ರಲ್ಲಿ ಒಂದು ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಎರಡು ಸ್ಥಾನ ಪಡೆದಿದೆ. ಈ ಬಾರಿ ಮೂವರು ಮಹಿಳೆಯರು (ಝೆಡ್‌ಪಿಎಂನಿಂದ ಇಬ್ಬರು, ಎಂಎನ್‌ಎಫ್‌ನಿಂದ ಒಬ್ಬರು) ವಿಧಾನಸಭೆ ಪ್ರವೇಶಿಸಲಿದ್ದಾರೆ.