ಭೀಕರ ಅಪಘಾತ: 8 ಮಂದಿ ಸಾವು
ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಗಾಯಾಳುಗಳನ್ನು ಘಾಟ್ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು.
ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿ, ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವನ್ನಪ್ಪಿದವರಲ್ಲಿ ಎರಡು ಕುಟುಂಬಗಳ ಜನರು ಸೇರಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಬಲಿಜೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್​ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಪಘಾತ ಸಂದರ್ಭದಲ್ಲಿ ವ್ಯಾನ್ ವೇಗವಾಗಿ ಚಲಿಸುತ್ತಿತ್ತು. ಮಂಜು ಇದ್ದುದರಿಂದ ಚಾಲಕನಿಗೆ ಟ್ರಕ್ ನಿಂತಿರುವುದು ಕಾಣಿಸದೇ ಇರುವ ಸಾಧ್ಯತೆ ಇದೆ. \