ಗ್ಲೋಬಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ ಮೂರನೇ ಆವೃತ್ತಿ ಉದ್ಘಾಟನೆ
ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಗ್ಲೋಬಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ (ಜಿಎಂಐಎಸ್) 2023 ರ ಮೂರನೇ ಆವೃತ್ತಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.
ಹೊಸ ವಿಶ್ವ ಕ್ರಮಾಂಕವು ರೂಪುಗೊಳ್ಳುತ್ತಿದೆ ಮತ್ತು ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ, ಜಗತ್ತು ಹೊಸ ಆಕಾಂಕ್ಷೆಗಳೊಂದಿಗೆ ಭಾರತದತ್ತ ನೋಡು ತ್ತಿದೆ ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದರು.
“ಇಂದಿನ ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಕೆಲಸ ಮಾಡುತ್ತಿದೆ. ನಾವು ಪ್ರತಿಯೊಂದು ಕ್ಷೇತ್ರದಲ್ಲೂ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಿದ್ದೇವೆ” ಎಂದು ಗ್ಲೋಬಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ (ಜಿಎಂಐಎಸ್) 2023 ರ ಮೂರನೇ ಆವೃತ್ತಿ ಯಲ್ಲಿ ಪ್ರಧಾನಿ ಮೋದಿ ಹೇಳಿದರು.
“ಇತಿಹಾಸವೇ ಸಾಕ್ಷಿಯಾಗಿದೆ. ಭಾರತದ ಕಡಲ ಸಾಮರ್ಥ್ಯಗಳು ಬಲಿಷ್ಠವಾಗಿರುವಾಗಲೆಲ್ಲ ದೇಶ ಮತ್ತು ಜಗತ್ತಿಗೆ ಲಾಭವಾಗುತ್ತದೆ. ಕಳೆದ 9-10 ವರ್ಷ ಗಳಿಂದ ಈ ವಲಯವನ್ನು ಬಲಪಡಿಸಲು ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ಹೇಳಿದರು.