ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದು: ರಾಹುಲ್ ಟ್ವಿಟರ್ ಬಯೋ ಬದಲು
ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆ ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.