ವಿ ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿದ್ದ ಅರ್ಜಿ ವಜಾ
ಆಗಸ್ಟ್ 12ರವರೆಗೆ 5 ದಿನಗಳ ಕಾಲ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ ಡಿ) ವಶಕ್ಕೆ ನೀಡಿ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಎಂ ಎಂ ಸುಂದರೇಶ್ ಅವರಿದ್ದ ಪೀಠ ಆದೇಶಿಸಿದೆ. ಬಾಲಾಜಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಎರಡು ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. ಇದರ ಜೊತೆಗೆ ಸಚಿವರ ಬಿಡುಗಡೆ ಪ್ರಶ್ನಿಸಿ ಇ ಡಿ ಸಲ್ಲಿಸಿದ್ದ ಮನವಿಯನ್ನು ಸಹ ನ್ಯಾಯಾಲಯ ಆಲಿಸಿತು. ಪ್ರಕರಣದ ತೀರ್ಪನ್ನು ಆಗಸ್ಟ್ 2ರ ಬುಧವಾರದಂದು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.
ಮದ್ರಾಸ್ ಹೈಕೋರ್ಟ್ ಈ ಹಿಂದೆ ಸಚಿವರನ್ನು ಬಿಡುಗಡೆ ಮಾಡುವುದರ ವಿರುದ್ಧ ತೀರ್ಪು ನೀಡಿತ್ತು ಈ ಹಿನ್ನೆಲೆಯಲ್ಲಿ ಸಚಿವರು ಹಾಗೂ ಅವರ ಪತ್ನಿ ಎಸ್ ಮೇಘಲಾ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.