ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು
ನವದೆಹಲಿ:ಗುಜರಾತ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟ ಲ್ವಾಡ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಒಂದು ವಾರದ ಮಧ್ಯಂತರ ಜಾಮೀನು ನೀಡಿದೆ. ಜು.8 ರಂದು ತೀಸ್ತಾ ಸೆಟಲ್ವಾಡ್ ಪ್ರಕರಣದ ಜಾಮೀನು ಅರ್ಚಿ ವಿಚಾರಣೆ ಮಾಡುವುದಾಗಿ ತ್ರಿಸದಸ್ಯ ಪೀಠ ಹೇಳಿದೆ.
ಗುಜರಾತ್‌ ಹೈಕೋರ್ಟ್‌ ಶನಿವಾರ ತೀಸ್ತಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಕೂಡಲೇ ಶರಣಾಗುವಂತೆ ಸೂಚಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ಧ ತೀಸ್ತಾ ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿದ್ದರು.
2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಟಾಪ್ ಕಾಪ್ ಆರ್ಬಿ ಶ್ರೀಕುಮಾರ್ ಅವರನ್ನು ಸುಳ್ಳು ಸಾಕ್ಷ್ಯಾಧಾರ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಜೂ. 25, 2022 ರಂದು ಬಂಧಿಸಲಾಯಿತು.