ಎನ್‍ಕೌಂಟರ್‍ನಲ್ಲಿ ಪಾತಕಿ ಗುಫ್ರಾನ್ ಹತ್ಯೆ
ಲಕ್ನೋ:ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಕ್ರಿಮಿನಲ್ ಹಿನ್ನಲೆಯ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪಾತಕಿಯನ್ನು ಗುಫ್ರಾನ್ ಎಂದು ಗುರುತಿಸಲಾಗಿದ್ದು, ಈತ ಕೊಲೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಬೇಕಾಗಿದ್ದ.
ಬೆಳಿಗ್ಗೆ ವಿಶೇಷ ಕಾರ್ಯಪಡೆ ತಂಡವು ಕೌಶಂಬಿ ಜಿಲ್ಲೆಯಲ್ಲಿ ದಾಳಿ ನಡೆಸಿ ಮೊದಲು ಶರಣಾಗುವಂತೆ ಪೊಲೀಸರು ಗುಫ್ರಾನ್‍ಗೆ ಸೂಚಿಸಿದರು. ಆದರೆ ಪೊಲೀಸರ ಮೇಲೆ ಗುಂಡು ಹಾರಿಸಿದ. ಇದಕ್ಕೆ ಪ್ರತಿಯಾಗಿ ಪೊಲೀಸರು ಪ್ರತಿದಾಳಿ ನಡೆಸಿ ಗುಂಡು ಹಾರಿಸಿದರು.
ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಪೊಲೀಸರ ಪ್ರಕಾರ, ಪ್ರತಾಪ್‍ಗಢ್ ಮತ್ತು ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಗುಫ್ರಾನ್ ಬೇಕಾಗಿದ್ದ.