ಮೋದಿ ”ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ’: ಸ್ವಾಮಿ ಗೇಲಿ
ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿ, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ.
ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.