70,000 ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳ ವಿತರಣೆ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 70,000 ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದರು.
ರೋಜ್‌ಗಾರ್ ಮೇಳವು ದೇಶದಾದ್ಯಂತ 43 ಸ್ಥಳಗಳಲ್ಲಿ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/UTಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ.
ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಸಚಿವಾಲಯ, ಕುಟುಂಬ ಕಲ್ಯಾಣ, ಪರಮಾಣು ಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪರಮಾಣು ಶಕ್ತಿ ಇಲಾಖೆ ಮತ್ತು ಗೃಹ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಕ್ಕೆ ಸೇರ್ಪಡೆ ಗೊಳ್ಳಲಿದ್ದಾರೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.
ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.