ಹಜ್ ಯಾತ್ರೆ ವೇಳೆ ಕಾರು ಅಪಘಾತ: ನಾಲ್ವರ ಸಾವು
ಮುಂಬೈ:ಹಜ್ ಯಾತ್ರೆಗೆಂದು ತೆರಳುತ್ತಿದ್ದ ಕಾರು ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮುಂಬೈ-ನಾಗ್ಪುರ ಸಮೃದ್ಧಿ ಎಕ್ಸ್‌ಪ್ರೆಸ್‌ ವೇ ಯ ನಾಸಿಕ್ ಸ್ಟ್ರೆಚ್‌ ಎಂಬಲ್ಲಿ ನಡೆದಿದೆ.
ಮುಂಬೈನಿಂದ ಶಿರಡಿಗ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಟೊಯೊಟಾ ಕಾರಿನ ಟೈರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ವಿಮಾನ ನಿಲ್ಧಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.