ಔರಂಗಜೇಬ್ ಚಿತ್ರ ಅಪ್‍ಲೋಡ್ ಮಾಡಿದ ಆರೋಪ: ಓರ್ವನ ಬಂಧನ, ಬಿಡುಗಡೆ
ಮುಂಬೈ:ಔರಂಗಜೇಬ್ ಅವರ ಚಿತ್ರವನ್ನು ಅಪ್‍ಲೋಡ್ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಮೊಬೈಲ್ ಸೇವಾ ಪೂರೈಕೆದಾರರ ಔಟ್‍ಲೆಟ್‍ನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಅಮರ್‍ಜೀತ್ ಸುರ್ವೆ ಅವರು ಪ್ರಕರಣವನ್ನು ದಾಖಲಿಸಿದ್ದರು. ಔರಂಗ ಜೇಬ್‍ನ ಚಿತ್ರವನ್ನು ತನ್ನ ಪ್ರೋಫೈಲ್ ಚಿತ್ರವಾಗಿ ಹಾಕಿಕೊಂಡಿರುವ ಕಾರಣ, ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದರು.
ಆರೋಪಿಯು ಸಮಾಜದಲ್ಲಿ ಕೋಮುಗಲಭೆ ಉಂಟು ಮಾಡುವ ದುರುದ್ದೇಶದಿಂದಲೇ ವಾಟ್ಸಾಪ್ ಪ್ರೋಫೈಲ್ ಚಿತ್ರವಾಗಿ ಅಪ್‍ಲೋಡ್ ಮಾಡಿದ್ದಾಗಿ ಒಪ್ಪಿಕೊಂಡಿದ್ದ. ಬಳಿಕ ಪ್ರೋಫೈಲ್ ಚಿತ್ರವನ್ನು ತೆಗೆದು ಹಾಕುವುದಾಗಿ ಭರವಸೆ ನೀಡಿದ್ದಾಗಿ ಹೇಳಿಕೊಂಡಿದ್ದ. ಪೊಲೀಸರು ಭಾರತೀಯ ದಂಡನೆಯ ಸೆಕ್ಷನ್ 298 ಮತ್ತು 153-ಂ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ನಂತರ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಲಾಯಿತು. ಸದ್ಯಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ.
ಮೊಘಲ್ ಚಕ್ರವರ್ತಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸಿದ ಆರೋಪದ ಬಗ್ಗೆ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಕೋಮು ಉದ್ವಿಗ್ನತೆಯ ಘಟನೆಗಳು ನಡೆದಿರುವುದನ್ನು ಸ್ಮರಿಸಬಹುದಾಗಿದೆ.
