ಕಾರು ಬುಲ್ಡೋಜರ್‌ಗೆ ಡಿಕ್ಕಿ: ಗುಜರಾತ್‌ನ ಮಾಜಿ ಕೃಷಿ ಸಚಿವ ಸಾವು
ಅಮ್ರೇಲಿ:ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದು ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿ ಯಾ ಸಾವನ್ನಪ್ಪಿದ್ದಾರೆ.
ಸಾವರ್ಕುಂಡ್ಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಘಾಸಿಯಾ (69), ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಗ್ರಾಮದಿಂದ ಸಾವರಕುಂದಕ್ಕೆ ಹಿಂತಿರುಗುತ್ತಿದ್ದಾಗ ವಂದ ಗ್ರಾಮದ ಬಳಿ ರಾಜ್ಯ ಹೆದ್ದಾರಿ ಯಲ್ಲಿ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬುಲ್ಡೋಜರ್‌ಗೆ ಕಾರು ಡಿಕ್ಕಿ ಹೊಡೆದು ಮಾಜಿ ಸಚಿವರು ಗಾಯ ಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಘಾಸಿಯಾ 2012 ರ ವಿಧಾನಸಭಾ ಚುನಾವಣೆಯಲ್ಲಿ ಸಾವರಕುಂಡ್ಲಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಗೆದ್ದರು. 2016 ರಲ್ಲಿ ಅವರು ವಿಜಯ್ ರೂಪಾನಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.