  : ವಿವಾದದ ನಡುವೆಯೇ ಬರೋಬ್ಬರಿ 14 ಲಕ್ಷ ತಿರುಪತಿ ಲಡ್ಡು ಮಾರಾಟ
ಹೈದರಾಬಾದ್‌: ತಿರುಪತಿ ದೇಗುಲದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ (  ) ವಿವಾದದ ಕಿಚ್ಚು ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದರೂ ದೇಗುಲಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆಯಲ್ಲೇನು ದೊಡ್ಡಮಟ್ಟದ ಕಡಿತವೇನು ಕಂಡು ಬಂದಿಲ್ಲ. ಪ್ರತಿನಿತ್ಯ 60 ಸಾವಿರಕ್ಕೂ ಅಧಿಕ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಕೇವಲ ನಾಲ್ಕು ದಿನಗಳಲ್ಲಿ ಬರೋಬ್ಬರಿ 14 ಲಕ್ಷ ಲಡ್ಡುಗಳು ಮಾರಾಟವಾಗಿವೆ ಎಂದರೆ ನಂಬಲೇಬೇಕು.
ದೇವಾಲಯದ ಅಧಿಕಾರಿಗಳ ಪ್ರಕಾರ, ಕೇವಲ ನಾಲ್ಕು ದಿನಗಳಲ್ಲಿ 14 ಲಕ್ಷ ತಿರುಪತಿ ಲಡ್ಡುಗಳು ಮಾರಾಟವಾಗಿವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಸೆಪ್ಟೆಂಬರ್ 19 ರಂದು 3.59 ಲಕ್ಷ, ಸೆಪ್ಟೆಂಬರ್ 20 ರಂದು 3.17 ಲಕ್ಷ, ಸೆಪ್ಟೆಂಬರ್ 21 ರಂದು 3.67 ಲಕ್ಷ ಮತ್ತು ಸೆಪ್ಟೆಂಬರ್ 22 ರಂದು 3.60 ಲಕ್ಷ ಲಡ್ಡುಗಳು ಮಾರಾಟವಾಗಿವೆ. ಪ್ರತಿನಿತ್ಯ ಸರಾಸರಿ 3.50 ಲಕ್ಷ ಲಡ್ಡುಗಳು ಮಾರಾಟ ಆಗುತ್ತಿವೆ. ನಿತ್ಯ ದೇಗುಲದಲ್ಲಿ 3ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ  ಎಂದು ಮಾಧ್ಯಮಗಳು ವರದಿ ಮಾಡಿವೆ.
ಇನ್ನು ದೇಗುಲದಲ್ಲಿ ಸಿಹಿತಿಂಡಿಗಳನ್ನು ಬೆಂಗಾಲ್ ಗ್ರಾಂ, ಹಸುವಿನ ತುಪ್ಪ, ಸಕ್ಕರೆ, ಗೋಡಂಬಿ, ಒಣದ್ರಾಕ್ಷಿ ಮತ್ತು ಬಾದಾಮಿಗಳಿಂದ ತಯಾರಿಸಲಾಗುತ್ತದೆ. ಗಮನಾರ್ಹವಾಗಿ, ಅವುಗಳ ತಯಾರಿಕೆಯಲ್ಲಿ ಪ್ರತಿದಿನ ಸುಮಾರು 15,000 ಕೆಜಿ ಹಸುವಿನ ತುಪ್ಪವನ್ನು ಬಳಸಲಾಗುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಹೇಳಿದೆ.
ಏನಿದು ವಿವಾದ?
ಕೋಟ್ಯಂತರ ಭಕ್ತರು ಭೇಟಿ ನೀಡುವ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ( ) ಮತ್ತು ಮೀನಿನ ಎಣ್ಣೆ ( ) ಬೆರೆಸಲಾಗಿದೆ ಎಂಬ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದ ತನಿಖೆಯನ್ನು ಆಂಧ್ರ ಸರ್ಕಾರ ಎಸ್‌ಐಟಿಗೆ ಒಪ್ಪಿಸಿದೆ. ಮತ್ತೊಂದೆಡೆ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ 11ದಿನಗಳ ಪ್ರಾಯಶ್ಚಿತ ಕಾರ್ಯವನ್ನು ಕೈಗೆತಿತಕೊಂಡಿದ್ದಾರೆ.
ವೈಎಸ್‌ಆರ್‌ಪಿ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂದು ಗುಜರಾತ್‌ನ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಿಂದ ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ತುಪ್ಪದಲ್ಲಿ ಮೀನಿನ ಎಣ್ಣೆ, ದನದ ಮಾಂಸ ಟಾಲೋ ಮತ್ತು ಹಂದಿಮಾಂಸದ ಕುರುಹುಗಳಿವೆ ಎಂದು ವರದಿ ಸೂಚಿಸಿದೆ.
ಕರ್ನಾಟಕ ಹಾಲು ಒಕ್ಕೂಟ () ಈ ವಿವಾದಕ್ಕೆ ಸಂಬಂಧಪಟ್ಟಂತೆ ಗುರುವಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಕೆಎಂಎಫ್, ‘ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಮಂಡಳಿಯು ಕಳೆದ ನಾಲ್ಕು ವರ್ಷಗಳಿಂದ ತಮ್ಮಿಂದ (ಕೆಎಂಎಫ್‌) ತುಪ್ಪವನ್ನು ಖರೀದಿಸಿಲ್ಲ’ ಎಂದು ಸ್ಪಷ್ಟನೆ ನೀಡಿದೆ. ಚಂದ್ರಬಾಬು ನಾಯ್ಡು ಆರೋಪಕ್ಕೆ ಸಂಬಂಧಿಸಿದಂತೆ ವರದಿಯನ್ನು ಟಿಡಿಪಿ () ಬಹಿರಂಗಪಡಿಸಿದೆ.
ಈ ಸುದ್ದಿಯನ್ನೂ ಓದಿ:    : ಬೀಫ್‌ ಕೊಬ್ಬು ಕಲಬೆರಕೆ ಆಯ್ತು.. ಇದೀಗ ಗುಟ್ಕಾ ಪ್ಯಾಕೆಟ್‌ ಪತ್ತೆ; ಒಂದೆರಡಲ್ಲ ತಿರುಪತಿ ಲಡ್ಡು ವಿವಾದ!