    : ಸಿಎಂ ಮುಂದೇನ್‌ ಮಾಡ್ತಾರೆ? ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಹೈಕೋರ್ಟ್‌ ( ) ತೀರ್ಪಿನ ಬಗ್ಗೆ ನಮಗೆ ಗೌರವವಿದೆ. ಆದರೆ ಈ ತೀರ್ಪನ್ನು (    ) ಪ್ರಶ್ನಿಸಿ ದ್ವಿಸದಸ್ಯ ಪೀಠದ ಮೊರೆ ಹೋಗಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕೋರ್ಟ್‌ನ ಬಗ್ಗೆ ನಮಗೆ ಗೌರವವಿದೆ. ಆದರೆ, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮುಡಾ ಕೇಸ್‌ನಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ಅವರು ಈ ಮಾತನಾಡಿದ್ದಾರೆ.
ಪ್ರಾಸಿಕ್ಯೂಷನ್‌ಗೆ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ. ಸಿಂಗಲ್ ಬೆಂಚ್‌ನಲ್ಲಿ ಅನುಮತಿ ಕೊಟ್ಟಿದ್ದಾರೆ. ಇನ್ನು ಡಬಲ್ ಬೆಂಚ್ ಇದೆ. ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17  ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್‌ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ. ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಬಿಜೆಪಿಯವರು ದೇಶದೆಲ್ಲೆಡೆ ಇದೇ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ನಿರಾಣಿ, ಡಿನೋಟಿಫೀಕೇಷನ್ ಕೇಸ್‌ಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳಲಿ. ನಮ್ಮ ರಾಜ್ಯಕ್ಕೆ ಇಷ್ಟು ಅನ್ಯಾಯ ಆಗಿದ್ದರೂ ಬಿಜೆಪಿಯವರು ನಮ್ಮ ರಾಜ್ಯದ ಪರ ಮಾತನಾಡಲಿಲ್ಲ. ಕೋರ್ಟ್ ತೀರ್ಪಿಗೆ ನಾವು ಗೌರವ ಕೊಡುತ್ತೇವೆ. ಡಬಲ್ ಬೆಂಚ್‌ನಲ್ಲೂ ಸೋಲಾದರೆ ನಂತರ ಸುಪ್ರೀಂ ಕೋರ್ಟ್ ಇದೆ . ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ಆರ್‌. ಅಶೋಕ್‌, ಗಣೇಶನನ್ನು ಬಂಧಿಸಿ ಇಟ್ಟ ಕಾರಣಕ್ಕಾಗಿ ಸಿಎಂಗೆ ಗಣೇಶನ ಶಾಪ ತಟ್ಟಿದೆ. ಅದಕ್ಕಾಗಿ ಇಂದು ಅವರ ವಿರುದ್ಧ ತೀರ್ಪು ಬಂದಿದೆ. ಈ ನಿರ್ಣಯ ಬಿಜೆಪಿಯ ಗೆಲುವು. ಬಿಜೆಪಿ ಈ ಹಗರಣದ ಕುರಿತು ಪಾದಯಾತ್ರೆ ಮಾಡಿತ್ತು. ವಿಧಾನಸಭೆಯ ಒಳಗೂ ಹೊರಗೂ ಪ್ರತಿಭಟನೆ ಮಾಡಿತ್ತು. ರಾಮಕೃಷ್ಣ ಹೆಗಡೆಯವರ ಶಿಷ್ಯ ಆಗಿದ್ದರೆ, ನೈತಿಕತೆ ಇದ್ದರೆ ರಾಜಿನಾಮೆ ಕೊಡಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:    : ಮುಂದುವರಿದ ಮುಡಾ ಸಂಕಷ್ಟ, ಸಿಎಂ ಸಿದ್ದರಾಮಯ್ಯ ಮುಂದಿನ ನಡೆ ಏನು?