7,633 ಹೊಸ ಕೋವಿಡ್‌ ಪ್ರಕರಣ ಪತ್ತೆ
ನವದೆಹಲಿ:ಹೊಸದಾಗಿ ವರದಿಯಾಗಿರುವ 7,633 ಕೋವಿಡ್‌ ಪ್ರಕರಣಗಳೂ ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,31,152ಕ್ಕೆ ತಲುಪಿದೆ.
ದೆಹಲಿಯಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ನಾಲ್ವರು ಕೇರಳದಲ್ಲಿ ಸಾವಿಗೀಡಾಗಿದ್ದಾರೆ. ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಂದೊಂದು ಸಾವಿನ ಪ್ರಕರಣಗಳು ವರದಿಯಾಗಿವೆ.
ದೇಶದಲ್ಲಿ ಈವರೆಗೆ ಒಟ್ಟು 4,48,34,859 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಈ ಪೈಕಿ ಶೇ 98.68 ರಷ್ಟು ಅಂದರೆ 4,42,42,474 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ದರ ಶೇ 1.18 ರಷ್ಟಿದ್ದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.14ರಷ್ಟಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈವರೆಗೆ 220.66 ಕೋಟಿ ಡೋಸ್‌ ಲಸಿಕೆ ವಿತರಿಸಲಾಗಿದೆ