ಮೀಡಿಯಾ ಒನ್ ಮೇಲಿನ ನಿಷೇಧ ವಾಪಸ್‌
ನವದೆಹಲಿ:ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.
ಮುಖ್ಯ ನ್ಯಾಯಮೂರ್ತಿ ಬಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರುಗಳಿದ್ದ ದ್ವಿಸದಸ್ಯ ಪೀಠ ಮಹತ್ವದ ಆದೇಶ ನೀಡಿದ್ದು, ರಾಷ್ಟ್ರೀಯ ಭದ್ರತಾ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂಬ ಕೇಂದ್ರ ಗೃಹ ಸಚಿವಾಲಯದ ವಾದವನ್ನು ತಳ್ಳಿ ಹಾಕಲಾಗಿದೆ.