ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ
ಹೈದರಾಬಾದ್:ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು.
ವಾರಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವ ಕಾಯುಕ್ರಮವಿದ್ದು ಇದರ ಸಿದ್ದತೆ ನಡುವೆ ಬಂಧಿಸಿರುವುದಕ್ಕೆ ವ್ಯಾಪಕ ಟೀಕೆಗಳು ಶುರುವಾಗಿದೆ.
ಸಂಸದರ ನಿವಾಸದ ಬಳಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದ ರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.
ಬಂಡಿ ಸಂಜಯ್ ಬಂಧನದ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಏ.8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್‍ನಿಂದ ತಿರುಪತಿಗೆ ವಂದೇ ಭಾರತ್ ರೈಲನ್ನು ಉದ್ಘಾಟಿಸುವ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.