ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನಿಂದ ಸಹ ಪ್ರಯಾಣಿಕನಿಗೆ ಬೆಂಕಿ: 9 ಮಂದಿಗೆ ಗಾಯ
ತಿರುವನಂತಪುರಂ:ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.
ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ ಪರಿಣಾಮ ಗೊಂಡಿ ದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸ ಲಾಗಿದೆ.
ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು.
ಘಟನೆಯ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದೆ ಎಂದು ಕೆಲವು ಪ್ರಯಾಣಿಕರು ದೂರಿದರು. ಈ ಹಿನ್ನೆಲೆ ಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಆರೋಪಿ ಇನ್ನೂ ಪತ್ತೆ ಆಗಿಲ್ಲ. ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.