ಮದ್ರಾಸ್‍ನ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದಲ್ಲಿ ಮೂರನೇ ಕೃತ್ಯ..!
ಚೆನ್ನೈ:ಮದ್ರಾಸ್‍ನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆ ಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷದಲ್ಲಿ ಮೂರನೇ ಆತ್ಮಹತ್ಯೆಯಾಗಿದೆ.
ವಿದ್ಯಾರ್ಥಿ ಪಶ್ಚಿಮ ಬಂಗಾಳದ 32 ವರ್ಷದವನಾಗಿದ್ದು, ಐಐಟಿಯಲ್ಲಿ ಪಿಎಚ್‍ಡಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗುವ ಗಂಟೆಗಳ ಮೊದಲು, ವಿದ್ಯಾರ್ಥಿಯು ಕ್ಷಮಿಸಿ, ನಾನು ಸಾಕಷ್ಟು ಒಳ್ಳೆಯವನಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಅನ್ನು ಪೋಸ್ಟ್ ಮಾಡಿದ್ದಾನೆ ಎಂದು ಪೋಲೀಸರು ಹೇಳುತ್ತಾರೆ.
ತಕ್ಷಣ ಸಂಬಂಧಪಟ್ಟವರಿಗೆ ಸುದ್ದಿ ಮುಟ್ಟಿಸಿ ನಂತರ ಆಂಬ್ಯುಲೆನ್ಸ್‍ನಲ್ಲಿ ಆತನನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ, ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಚೆನ್ನೈನ ಐಐಟಿ ಕ್ಯಾಂಪಸ್‍ನಲ್ಲಿ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿ ಮತ್ತು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದರು.