ಕರೋನಾ: 2,994 ಹೊಸ ಪ್ರಕರಣಗಳು ಪತ್ತೆ
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,18,781ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ತಲುಪಿದೆ. ಒಟ್ಟು ಚೇತರಿಸಿಕೊಂಡ ವರ ಸಂಖ್ಯೆ 4,41,71,551ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,43,364 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,16,76,372 ಮಂದಿಯನ್ನು ಪರೀಕ್ಷೆಗೊಳ ಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,66,09,015 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.