  : ಮದುವೆ ದಿಬ್ಬಣದ ಬಸ್‌ ಉರುಳಿ 30 ಮಂದಿ ಸಾವು
ಬೆಂಗಳೂರು:ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮದುವೆ ದಿಬ್ಬಣ ಸಾಗಿಸುತ್ತಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದಿದೆ ( ) . ಘಟನೆಯಲ್ಲಿ ಸುಮಾರು 25 ರಿಂದ 30 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬಸ್ ಹರಿದ್ವಾರದ ಲಾಲ್ಧಾಂಗ್‌ನಿಂದ ಪೌರಿಯ ಬಿರೋಂಖಲ್ ಗ್ರಾಮಕ್ಕೆ ಹೋಗುತ್ತಿತ್ತು. ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರಾಖಂಡ ವಿಧಾನಸಭಾ ಸ್ಪೀಕರ್ ರಿತು ಖಂಡೂರಿ ಸ್ಥಳಕ್ಕೆ ತಲುಪಿದಾಗ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದರು.
ರಾತ್ರಿ 8 ಗಂಟೆ ಸುಮಾರಿಗೆ ಸಿಮಂಡಿ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಆಳವಾದ ಕಮರಿಗೆ ಬಿದ್ದಿದೆ. ಬಸ್ಸಿನಲ್ಲಿ 40-50 ಮದುವೆ ಮನೆಯವರು ಇದ್ದರು ಎಂದು ಹೇಳಲಾಗಿದೆ.
ವಧುವಿನ ಮನೆಯಿಂದ ಎರಡು ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ಅತಿಥಿಗಳು ತಮ್ಮ ಜೀವ ಉಳಿಸಲು ಕಿರುಚಿದ್ದರು.  ನಂತರ ಸ್ಥಳೀಯ  ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಎಸ್‌ಡಿಎಫ್ಆರ್ತಂ ಡ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಟಾರ್ಚ್ ಗಳು ಮತ್ತು ಮೊಬೈಲ್ ಫೋನ್‌ಗಳ ಸಹಾಯದಿಂದ ಪ್ರಾರಂಭವಾದ ರಕ್ಷಣಾ ಕಾರ್ಯಾಚರಣೆಗೆ ಹತ್ತಿರದ ಪೊಲೀಸ್ ಠಾಣೆಗಳೂ ನೆರವು ಕೊಟ್ಟವು.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.