ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಡಿಸ್ನಿ+ ಹಾಟ್‌ ಸ್ಟಾರ್ ಸೇವೆ ಸ್ಥಗಿತ
ನವದೆಹಲಿ:ಭಾರತದ ಕೆಲವು ಭಾಗಗಳಲ್ಲಿ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದ ವೇಳೆ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಡಿಸ್ನಿ+ ಹಾಟ್‌ ಸ್ಟಾರ್ ಸೇವೆ ಸ್ಥಗಿತಗೊಂಡಿತ್ತು. ಇದರಿಂದಾಗಿ ಬಳಕೆದಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ.
58 ಪ್ರತಿಶತ ಬಳಕೆದಾರರು ಅಪ್ಲಿಕೇಶನ್‌ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಮಾಡಿದ್ದು, 24 ಪ್ರತಿಶತದಷ್ಟು ಜನರು ವೆಬ್‌ಸೈಟ್‌ನಲ್ಲಿ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ. 18 ಪ್ರತಿಶತದಷ್ಟು ಜನರು ವಿಡಿಯೋ ಸ್ಟ್ರೀಮಿಂಗ್‌ನಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ ಎಂದು ವರದಿ ಮಾಡಿವೆ.
ನಮ್ಮ ಅಪ್ಲಿಕೇಶನ್‌ಗಳು ಮತ್ತು ವೆಬ್‌ನಾದ್ಯಂತ ಕೆಲವು ಅನಿರೀಕ್ಷಿತ ತಾಂತ್ರಿಕ ಸಮಸ್ಯೆಗಳನ್ನು ನೋಡುತ್ತಿದ್ದೇವೆ. ಇದನ್ನು ಶೀಘ್ರವಾಗಿ ಪರಿಹರಿ ಸಲು ತಂಡವು ಕೆಲಸ ಮಾಡುತ್ತಿದೆ. ಉಂಟಾದ ಅನಾನುಕೂಲತೆಗಾಗಿ ವಿಷಾದಿಸು ತ್ತೇವೆ ಎಂದು ಡಿಸ್ನಿ,ಹಾಟ್‌ಸ್ಟಾರ್ ಟ್ವೀಟ್ ಮಾಡಿವೆ.
ದೇಶಾದ್ಯಂತ ಬಳಕೆದಾರರು ಡಿಸ್ನಿ+ಹಾಟ್‌ಸ್ಟಾರ್ ಸೇವೆಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿ ಆಕ್ರೋಶ ಹೊರ ಹಾಕಿದ್ದಾರೆ.
ದೆಹಲಿ, ಮುಂಬೈ, ಹೈದರಾಬಾದ್, ಬೆಂಗಳೂರು, ಕೋಲ್ಕತ್ತಾ, ಜೈಪುರ, ಲಕ್ನೋ ಮತ್ತು ಚೆನ್ನೈ ಸೇರಿದಂತೆ ಇತರ ನಗರಗಳು ಸ್ಥಗಿತವನ್ನು ಎದುರಿಸುತ್ತಿವೆ ಎಂದು ತಿಳಿದು ಬಂದಿದೆ.