ಭೀಕರ ರಸ್ತೆ ಅಪಘಾತ: ಕಾಂಗ್ರೆಸ್‌ನ ಮಾಜಿ ಶಾಸಕ ಸಾವು
ಒಡಿಶಾ:ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಅರ್ಜುನ್ ಚರಣ್ ದಾಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಖರಾಸ್ರೋಟಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ. ಅರ್ಜುನ್ ಚರಣ್ ದಾಸ್ ಅವರ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯ ಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಾನೆ ಸಂಭವಿಸಿದ ಕೂಡಲೇ ದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದ್ರೆ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ದ್ವಿಚಕ್ರ ವಾಹನ ದಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಕಟಕ್ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿ ಹೇಳಿದರು.