ಎರಡನೇ ದಿನವೂ ಮುಂದುವರೆದ ಕುಸ್ತಿಪಟುಗಳ ಪ್ರತಿಭಟನೆ
ನವದೆಹಲಿ:ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ.
ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು ತರಬೇತುದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎರಡನೇ ದಿನವು ಸುಮಾರು 200 ಭಾರತೀಯ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಫೆಡರೇಶನ್ ಮುಖ್ಯಸ್ಥರು ಮತ್ತು ಇತರ ಹಲವಾರು ತರಬೇತುದಾರರು ಅನೇಕ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರು ತಪ್ಪಿತಸ್ಥರು ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ದೇಶಕ್ಕಾಗಿ ಚಿನ್ನದ ಪದಕ ಗೆದ್ದಿರುವ ವಿನೇಶ್ ಫೋಗಟ್ ಅವರು ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ.